Select Your Language

Notifications

webdunia
webdunia
webdunia
webdunia

ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಆಣೆ ಮಾಡಿ

ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಆಣೆ ಮಾಡಿ
bangalore , ಬುಧವಾರ, 20 ಏಪ್ರಿಲ್ 2022 (20:01 IST)
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ ಅವರ ಸಾಮಾಜಿಕ ಜಾಲತಾಣದ ವಾರ್ ಮುಂದುವರಿದಿದೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ- ಟೀಮ್ ಎಂದು ಹೇಳಿದ್ದರು. ಇದಕ್ಕೆ ಕೆಂಡಾಮಂಡಲ ಆಗಿದ್ದ ಕುಮಾರಸ್ವಾಮಿ ಅವರು 'ಹೆಸರಲ್ಲಿ ರಾಮ! ಉಂಡಮನೆಗೆ ಪಂಗನಾಮ' ಎಂದು ಸಿದ್ದರಾಮಯ್ಯ ಅವರ ಕಾಲೆಳೆದಿದ್ದರು. ಅದಕ್ಕೆ ಮತ್ತೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು, 'ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಎಚ್‌ಡಿ. ದೇವೇಗೌಡ ಅವರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ದ ಇದ್ದೀರಾ ಎಚ್‌.ಡಿ. ಕುಮಾರಸ್ವಾಮಿ ಅವರೇ' ಎಂದು ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಥಿಯೇಟರ್​ನಲ್ಲೇ ಗುಂಡಿನ ದಾಳಿ