Publish Date: Wed, 20 Apr 2022 (20:43 IST)
Updated Date: Wed, 20 Apr 2022 (20:45 IST)
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಕ್ಷದವರೇ ಡಿ.ಜಿ. ಹಳ್ಳಿ ರೀತಿಯಲ್ಲಿ ಹುಬ್ಬಳ್ಳಿಯಲ್ಲಿ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸನ್ನು ಇಡೀ ದೇಶದಲ್ಲಿ ತಿರಸ್ಕಾರ ಮಾಡಲಾಗಿದೆ. ಕರ್ನಾಟಕ ಒಂದರಲ್ಲಿ ಜೀವ ಉಳಿದಿದೆ ಎಂದು ಟೀಕಾಪ್ರಹಾರ ನಡೆಸಿದರು. ಅಷ್ಟೇ ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಆಣೆ ಮಾಡು ಅಂತ ಹೇಳಲು ನೀವು ಯಾವೂರ ದಾಸಯ್ಯ. ಎಚ್ಚರಿಕೆಯಿಂದ ಮತನಾಡಬೇಕು. ಪದೇ ಪದೇ ಬಿಜೆಪಿಯ ಬಿ-ಟೀಂ ಎಂದು ಹೇಳುತ್ತಿದ್ದೀರಿ. ಯಾರಿಂದ ಈ ಸರ್ಕಾರ ನಡೆಯುತ್ತಿರುವುದು, ಸಿದ್ಧವನದಲ್ಲಿ ಕುಳಿತುಕೊಂಡು ನಡೆಸಿದರಲ್ಲಾ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಮೂಲ ಕಾರಣ ಸಿದ್ದರಾಮಯ್ಯ ಎಂದು ಆಕ್ರೋಶಭರಿತರಾಗಿ ನುಡಿದರು.