Select Your Language

Notifications

webdunia
webdunia
webdunia
webdunia

ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಪ್ರಮಾಣ ಮಾಡಲಿ : ರೇವಣ್ಣ

ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸುಳ್ಳು ಎಂದು ಪ್ರಮಾಣ ಮಾಡಲಿ : ರೇವಣ್ಣ
ಹಾಸನ , ಸೋಮವಾರ, 20 ಮಾರ್ಚ್ 2023 (11:38 IST)
ಹಾಸನ : ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸತ್ಯ ಅಲ್ಲ ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ. ನಾನೇನಾದರು ಒಂದು ಪದ ಎಡಿಟ್ ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ ಎಂದು ಮಾಜಿಸಚಿವ ಎಚ್.ಡಿ.ರೇವಣ್ಣ ಶಾಸಕ ಶಿವಲಿಂಗೇಗೌಡರಿಗೆ ಸವಾಲೆಸದರು.
 
ಇತ್ತೀಚೆಗೆ ವೈರಲ್ ಆಗಿದ್ದ ಎಚ್.ಡಿ.ರೇವಣ್ಣ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ಕುರಿತು ಅರಸೀಕೆರೆಯಲ್ಲಿ ಮಾತನಾಡಿದ ಅವರು, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ನನಗೆ ಗೊತ್ತಿಲ್ಲ. ರಾಗಿ ಕಳ್ಳ ಅಂದ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ಸತ್ಯ ಮಾಡಲಿಲ್ವಾ? ಕಳೆದ ಒಂದು ವರ್ಷದಿಂದ ಇದು ನಡೆಯುತ್ತಿದೆ.

ಕುರುಬರು, ಲಿಂಗಾಯತರು, ಒಕ್ಕಲಿಗರು ನನಗೆ ಓಟು ಹಾಕುವುದಿಲ್ಲ ಎಂದು ಆ ಆಡಿಯೋದಲ್ಲೇ ಹೇಳಿದ್ದಾರೆ. ನಾನೇನಾದರು ಒಂದು ಪದ ಎಡಿಟ್ ಮಾಡಿರುವುದನ್ನು ತೋರಿಸಿದರೆ ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ. ಇಲ್ಲವಾದರೆ ಆ ದೇವರು ಅವರನ್ನು ನೋಡಿಕೊಳ್ಳಲಿ. ಧರ್ಮಸ್ಥಳಕ್ಕೆ ಬಂದು ದೇವರ ಮೇಲೆ ಪ್ರಮಾಣ ಮಾಡಲಿ ಎಂದು ವಾಗ್ದಾಳಿ ನಡೆಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಗೆ ಥಳಿಸಿ, ಕುತ್ತಿಗೆ ಹಿಡಿದು ಬಲವಂತವಾಗಿ ಕ್ಯಾಬ್ನಲ್ಲಿ ಕೂರಿಸಿದ ಯುವಕ ?