Publish Date: Sun, 22 Dec 2019 (16:53 IST)
Updated Date: Sun, 22 Dec 2019 (16:55 IST)
ರಾಜ್ಯದ ಉಪ ಚುನಾವಣೆಯಲ್ಲಿ ಗೆದ್ದು ಶಾಸಕರಾದವರು ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ 13 ಜನರು ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಶ್ರೀಮಂತ ಪಾಟೀಲ್, ಮಹೇಶ್ ಕುಮಠಳ್ಳಿ, ಶಿವರಾಮ್ ಹೆಬ್ಬಾರ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಬಿ.ಎ.ಬಸವರಾಜ್, ಡಾ.ಸುಧಾಕರ, ಕೆ.ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಶರತ್ ಬಚ್ಚೇಗೌಡ ಹಾಗೂ ನಾರಾಯಣಗೌಡ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಹುಣಸೂರಿನ ಹೆಚ್.ಪಿ.ಮಂಜುನಾಥ್, ಶಿವಾಜಿನಗರದ ರಿಜ್ವಾನ್ ಅರ್ಷದ್ ಪ್ರಮಾಣವಚನ ಸ್ವೀಕಾರ ಮಾಡಿಲ್ಲ.