Publish Date: Thu, 13 Jul 2017 (15:25 IST)
Updated Date: Thu, 13 Jul 2017 (15:27 IST)
ಸರಕಾರದ ಸಂಪೂರ್ಣ ವ್ಯವಸ್ಥೆಯೇ ಹಾಳಾಗಿ ಹೋಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ತಪ್ಪು ಮಾಡಿದ್ರೆ ಸರಕಾರವೇ ಹೊಣೆ ಹೊರಬೇಕಾಗುತ್ತದೆ. ಇಬ್ಬರು ಹಿರಿಯ ಅಧಿಕಾರಿಗಳು ಪರಸ್ಪರ ಕೆಸರೆರಚಾಟ ಮಾಡುತ್ತಿರುವುದು ಸರಿಯಲ್ಲ ಎಂದರು.
ಕಲಹ ರಾಜಕೀಯವೋ, ಅಡಳಿತ ವೈಫಲ್ಯವೋ ಗೊತ್ತಿಲ್ಲ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಕರಾವಳಿಯಲ್ಲಿ ನಡೆಯುತ್ತಿರುವ ಘಟನೆಗಳು ಬೇಸರ ತರಿಸಿವೆ. ಹಾಸನದ ಜಿಲ್ಲಾಡಳಿತ ವ್ಯವಸ್ಥೆಯೂ ಕುಸಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜಕೀಯ ಬಹಿರಂಗವಾಗಿ ಹೇಳಲು ಆಗದಷ್ಟು ತುಂಬಾ ಕೆಟ್ಟದಾಗಿ ಹೋಗಿದೆ. ಅಶ್ಲೀಲ ಪದಗಳ ಬಳಕೆಯ ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.