Publish Date: Mon, 20 Jul 2020 (17:01 IST)
Updated Date: Mon, 20 Jul 2020 (17:03 IST)
ತಹಸೀಲ್ದಾರ್ ಹಾಗೂ ಇಬ್ಬರು ಸರಕಾರಿ ಆಸ್ಪತ್ರೆಯ ವೈದ್ಯರಿಗೆ ಕೊರೊನಾ ತಗುಲಿದೆ.
ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾಂವ ತಾಲ್ಲೂಕು ತಹಶೀಲ್ದಾರ್, ದಿನಪತ್ರಿಕೆಯ ಜಾಹೀರಾತು ಪ್ರತಿನಿಧಿ, ಸರ್ಕಾರಿ ಆಸ್ಪತ್ರೆಯ ಇಬ್ಬರು ಶುಶ್ರೂಷಾಧಿಕಾರಿಗಳು ಸೇರಿದಂತೆ ಒಟ್ಟು 54 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಈವರೆಗೆ 459 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. 292 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 11 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
156 ಪ್ರಕರಣಗಳು ಸಕ್ರಿಯವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಮಾಹಿತಿ ನೀಡಿದ್ದಾರೆ.