ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾವುದೇ ಪಕ್ಷಕ್ಕೆ ಸೇರಿದ್ದರು ಕಠಿಣ ಕ್ರಮ ಜರುಗಿಸಿ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಎಸ್. ಆರ್.ಪಾಟೀಲ್ ಆಗ್ರಹಿಸಿದ್ದಾರೆ.
ಬಾಗಲಕೋಟೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಪಾಟೀಲ್, ರಾಜ್ಯಸಭೆ ಚುನಾವಣೆಗೆ ಮಹಾತ್ಮ ಗಾಂಧಿಜೀ ಅವರೇ ಕಣಕ್ಕಿಳಿದರೂ ಹಣದ ಹೊಳೆ ಹರಿಸದೆ ಜಯಭೇರಿಯಾಗಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ವೋಟಿಗಾಗಿ ನೋಟು ಪ್ರಕರಣವನ್ನು ನಾನು ಖಂಡಿಸುತ್ತೇನೆ. ಚುನಾವಣೆಯಲ್ಲಿ ಭ್ರಷ್ಟರಿಗೆ ಮಣೆ ಹಾಕಬಾರದು. ಕೆಲವು ಭ್ರಷ್ಟ ರಾಜಕಾರಣಿಗಳಿಂದ ಎಲ್ಲ ರಾಜಕಾರಣಿಗಳಿಗೂ ಮಸಿ ಬಳಿದಂತಾಗುತ್ತಿದೆ. ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣದ ಕುರಿತು ತನಿಖೆಯಾಗಬೇಕು ಎಂದು ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.