Webdunia - Bharat's app for daily news and videos

Install App

ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ

Webdunia
ಮಂಗಳವಾರ, 3 ಜನವರಿ 2023 (18:12 IST)
ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿಯಾದ ಪ್ರದೀಪ್​ ಸಾವು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಅವರು BJP ಶಾಸಕ ಅರವಿಂದ ಲಿಂಬಾಳಿ ಹೆಸರನ್ನು ಡೆತ್​ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, BJP ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಇದು ನಡೆಯಬಾರದ ಘಟನೆಯಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪ್ರದೀಪ್ ಪತ್ನಿ ಪ್ರದೀಪ್​ ಸಾವಿಗೆ ನ್ಯಾಯ ಕೊಡಿಸಿ ಅಂತ ಕೇಳಿದ್ದಾರೆ. 1.5 ಕೋಟಿ ನಾವು ಇನ್ವೆಸ್ಟ್ ಮಾಡಿದ್ವಿ. ಒಂದೇ ಒಂದು ಪೈಸೆ ಲಾಭ ಬಂದಿಲ್ಲ. ನಮ್ಮ ಹಣ ವಾಪಸ್ ಕೊಡಿ ಅನ್ನೋದು ಇವರ ವಾದವಾಗಿದೆ. ಶಾಸಕ ಲಿಂಬಾವಳಿ ಹಣ ಕಾಸಿನ ವ್ಯವಹಾರ ಮಾಡಿದ್ದಾರೆ. ಪೊಲೀಸರು ಹಣವನ್ನು ವಾಪಸ್ ಕೊಡಿಸಬೇಕು. ಕೂಡಲೇ ಎಲ್ಲ‌ರನ್ನು ಅರೆಸ್ಟ್ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಯಾರೇ ತಪ್ಪಿ ಮಾಡಿದ್ರು ಸಹ ಅದು ತಪ್ಪು. ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಆಗಬೇಕು. MLA ಅವರನ್ನು ಅರೆಸ್ಟ್ ಮಾಡಬೇಕು. ಇಲ್ಲದೆ ಹೋದ್ರೆ ಅವರು ಸಾಕ್ಷಿ ನಾಶ ಮಾಡಬಹುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments