ಖಾಸಗಿ ಶಾಲೆಗಳ ಪರೀಕ್ಷಾ ಶುಲ್ಕವನ್ನು ಪಡೆಯುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಎಸ್‌ಎಲ್‌ಸಿ ಮಂಡಳಿಯ ನಿರ್ದೇಶಕರಿಗೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಹೊರಡಿಸಲಾಗಿದೆ.
ಮಾರ್ಚ್ 28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಿದೆ, ಮಾನ್ಯತೆ ನವೀಕರಿಸಲಾಗಿಲ್ಲ ಎಂಬ ಕಾರಣ ನೀಡಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಲಾಗಿದೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಎಸ್‌ಎಸ್‌ಎಲ್‌ಸಿ ಬೋರ್ಡ್‌ನ ಕ್ರಮವನ್ನು ಪ್ರಶ್ನಿಸಿ ವಿವೇಕನಗರದ ಶಾಂತಿ ನಿಕೇತನ ಶಾಲೆ ಮತ್ತು ಇಜಿಪುರದ ಮಾಡರ್ನ್ ಎಜುಕೇಷನ್ ಸೊಸೈಟಿ ಸೇರಿದಂತೆ ಎಂಟು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಪಿ ಭಟ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದಿಸಿ, ಅರ್ಜಿದಾರ ಶಾಲೆಗಳು ಕರ್ನಾಟಕ ಶಿಕ್ಷಣ ಕಾಯ್ದೆ ಅಡಿ ನೋಂದಣಿ ಮಾಡಿಕೊಂಡಿದ್ದು, ಸರ್ಕಾರದಿಂದ ಶಾಶ್ವತ ಮಾನ್ಯತೆ ವಿಚಾರಣೆಯನ್ನು ಪಡೆದಿವೆ. ಇದೀಗ ಮಾನ್ಯತೆ ನವೀಕರಿಸಿಕೊಳ್ಳಲು ಹೇಳುತ್ತಿರುವ ಶಿಕ್ಷಣ ಇಲಾಖೆ ಮಾನ್ಯತೆ ನವೀಕರಿಸಿಕೊಳ್ಳದಿದ್ದರೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ತಿಳಿಸಲಾಗಿದೆ.