Publish Date: Mon, 21 Feb 2022 (13:03 IST)
Updated Date: Mon, 21 Feb 2022 (13:18 IST)
ಬೆಂಗಳೂರು : ಈಶ್ವರಪ್ಪ ಹಾಗೆ ಹೇಳಿದ್ದಾರೆ ಎಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು.
ಕೊಲೆ ಪ್ರಕರಣದ ವಿಚಾರವನ್ನು ಸರ್ಕಾರ ಸರಿಯಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆಯೂ ಇಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದರಿಂದಾಗಿ ಸರ್ಕಾರ ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು. ಆದಷ್ಟು ಬೇಗ ಆರೋಪಿಗಳನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸಿದರು.
ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ಹಾಗೆ ಹೇಳಿದ್ದಾರೆ ಎಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ಕೊಲೆಯಿಂದ ಸರ್ಕಾರದ ವೈಫಲ್ಯ ಎಂದು ಹೇಳಲು ಆಗುವುದಿಲ್ಲ. ಸಂಪೂರ್ಣ ತನಿಖೆ ಆಗಬೇಕು. ತಪ್ಪಿತಸ್ಥ ಗೂಂಡಾಗಳನ್ನು ಬಂಧನ ಮಾಡಬೇಕು. ಅದನ್ನು ರಾಜ್ಯ ಸರ್ಕಾರ ಮಾಡುತ್ತದೆ ಎಂದು ತಿಳಿಸಿದರು.