Webdunia - Bharat's app for daily news and videos

Install App

ಸೋಲಿನ ಜವಾಬ್ದಾರಿ ಹೊತ್ತು, ಎಲ್ಲರೂ ಪಕ್ಷ ಬಲಪಡಿಸಿ: ಯತ್ನಾಳ್‌ಗೆ ಯಡಿಯೂರಪ್ಪ ಮನವಿ

Sampriya
ಮಂಗಳವಾರ, 26 ನವೆಂಬರ್ 2024 (17:40 IST)
ಬೆಂಗಳೂರು: ಬಿಜೆಪಿಯಲ್ಲಿ ಬಿವೈ ವಿಜಯೇಂದ್ರ ಹಾಗೂ ಯತ್ನಾಳ್‌ ನಡುವಿನ ಬಣ ಬಡಿದಾಟ ತಾರಕಕ್ಕೇರಿದ್ದು, ಇದೀಗ ವಕ್ಫ್‌ ವಿಚಾರವಾಗಿ  ಕೆಲ ಬಿಜೆಪಿ ನಾಯಕರ ಗುಂಪು ಪ್ರತ್ಯೇಕ ಹೋರಾಟ ನಡೆಸುತ್ತಿದೆ.

ಈ ವಿಚಾರಕ್ಕೆ ವಿರೋಧ ವ್ಯಕ್ತ‍ಪಡಿಸಿದ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು, ಹೋರಾಟ ಕೈಬಿಟ್ಟು ಪಕ್ಷ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮಂಗಳವಾರ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಸೋಲಿನಿಂದ ನಿರೀಕ್ಷೆ ಮೀರಿ ಹಿನ್ನಡೆಯಾಗಿದೆ. ಪಕ್ಷದ ಸೋಲಿನ ಜವಾಬ್ದಾರಿಯನ್ನು ಎಲ್ಲರೂ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯತ್ನಾಳ್‌ಗೆ ಸಲಹೆ ನೀಡಿದರು.

ಪ್ರತ್ಯೇಕವಾಗಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ನಮ್ಮೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಇತರರಿಗೆ ಮನವಿ ಮಾಡಿದ್ದಾರೆ. ಹೀಗಿದ್ದರೂ ಅವರು ತಮ್ಮ ಸ್ವಾಭಿಮಾನದಿಂದ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಯಡಿಯೂರಪ್ಪ ಅವರು ಅಸಮಾಧಾನ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments