Publish Date: Sat, 02 Sep 2017 (13:59 IST)
Updated Date: Sat, 02 Sep 2017 (14:00 IST)
ನೈತಿಕ ಹೊಣೆ ಹೊತ್ತು ಅಬಕಾರಿ ಖಾತೆ ಸಚಿವ ಆರ್.ಬಿ. ತಿಮ್ಮಾಪುರ್ ರಾಜೀನಾಮೆ ನೀಡಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಮೇಯರ್ ಚುನಾವಣೆಯಲ್ಲಿ ಸುಳ್ಳು ವಿಳಾಸ ನೀಡಿ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ಸಚಿವ ತಿಮ್ಮಾಪುರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಸರಕಾರವನ್ನು ಎಚ್ಚರಿಸಿದ್ದಾರೆ
ಸುಳ್ಳು ದಾಖಲೆ ನೀಡಿ ಟಿಎ,. ಡಿಎ ಪಡೆದಿರುವ ಆರೋಪ ಎದುರಿಸುತ್ತಿರುವ ಸಚಿವ ತಿಮ್ಮಾಪುರ್‌ಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ಯಾವುದೇ ಹಕ್ಕಿಲ್ಲ ಎಂದು ಗುಡುಗಿದ್ದಾರೆ.
ಕೋಮುಗಲಭೆಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿರುವ ಸಚಿವ ರಮಾನಾಥ್ ರೈ ಅವರನ್ನು ಸಂಪುಟದಿಂದ ಕೈಬಿಡಬೇಕು. ಹಿಂದೂ ನಾಯಕರ ಕೊಲೆ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಾದ್ಯಂತ ವಿಚಿದ್ರಕಾರಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವ ಕೆಎಫ್‌ಡಿ ಮತ್ತು ಪಿಎಫ್‌ಐ ಸಂಘಟನೆಗಳನ್ನು ಸರಕಾರ ನಿಷೇಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.