ದೇಶದಲ್ಲಿ ಹಲವು ಧರ್ಮಗಳಿವೆ. ಎಲ್ಲ ಧರ್ಮಗಳಿಗೂ ಅದರದೇ ಆದ ನೀತಿ-ನಿಯಮಗಳಿವೆ. ಆದರಿಂದ ಏಕರೂಪ ನಾಗರಿಕ ನೀತಿ ಸಂಹಿತೆಯನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಂರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್‌ಗೆ ವಿರೋಧ ವ್ಯಕ್ತಪಡಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ಆದರೆ, ಇದಕ್ಕೆ ನಾವು ತೀವ್ರ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದರು.
ದೇಶದಲ್ಲಿ ಹಲವು ಸಮಸ್ಯೆಗಳಿದ್ದು, ರೈತರ ಆತ್ಮಹತ್ಯೆ ಪ್ರಕರಣಗಳ ಹೆಚ್ಚುತ್ತಿದೆ. ಅಲ್ಲದೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ದೂರೆಯುತ್ತಿಲ್ಲ. ಮೊದಲು ಈ ಸಮಸ್ಯೆಗಳತ್ತ ಕೇಂದ್ರ ಸರಕಾರ ಒತ್ತು ನೀಡಬೇಕು ಎಂದು ಹೇಳಿದರು.
ನನಗೀಗ 84 ವರ್ಷ. ಆದರೆ, ನನ್ನ 55 ವರ್ಷಗಳ ರಾಜಕೀಯ ಜೀವನದಲ್ಲಿ ಪ್ರಾದೇಶಿಕ ಪಕ್ಷ ಅತೀ ಮುಖ್ಯ ಎಂದು ಗ್ರಹಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ನಾಯಕತ್ವವನ್ನು ಉಳಿಸಿ, ಬೆಳೆಸುವ ಕೆಲಸ ಆಗಬೇಕಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ