ಆರನೇ ತರಗತಿಯಿಂದ ಶಾಲೆಗಳು ಆರಂಬವಾಗಿವೆ. ಆದರೆ 1-5ರವೆರೆಗೆ ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರವಾಘಿ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, 1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳುತ್ತೇ ಎಂಬುದನ್ನು ನೋಡಬೇಕು. ಒಂದು ವೇಳೆ ಅವ್ರು ಹಂತ ಹಂತವಾಗಿ ಶಾಲೆ ಆರಂಭಿಸಿ ಅಂದರೆ, 1 ರಿಂದ 2 ಹಾಗೂ 3 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ. ಒಂದು ವೇಳೆ ಈ ರೀತಿ ನಿರ್ಧಾರ ಆದರೂ ಸಮಯ ಜಾಸ್ತಿ ತಗೊಳಲ್ಲ. ಒಂದು ಹತ್ತು ದಿನಗಳಲ್ಲಿ ಉಳಿಕೆ ತರಗತಿ ಗಳ ಬಗ್ಗೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ. ಸದ್ಯಕ್ಕೆ ಇದುವರೆಗೂ ಶಾಲೆ ಆರಂಭಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದಿಲ್ಲ. ಸಿಎಂ ಸಭೆಗೆ ಸಮಯ ಕೊಟ್ಟ ಕೂಡಲೇ, ತಜ್ಞರಿಂದ ಅಭಿಪ್ರಾಯ ಪಡೆಯುತ್ತೇವೆ. ಆ ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಮಾಡ್ತೇವೆ. ಈಗಾಗಲೇ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ನಡೆಸಿದೆ. ಶನಿವಾರ ಭಾನುವಾರ ತರಗತಿ ನಡೆಸುವ ಬಗ್ಗೆ ಚಿಂತನೆ ಇದೆ. ಆದರೆ ಪಠ್ಯ ಕಡಿತ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಅಂತ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ರು.