Webdunia - Bharat's app for daily news and videos

Install App

ಚುನಾವಣೆ ವೇಳೆ ಚಲುವರಾಯಸ್ವಾಮಿ ಹಣ ಪಡೆದಿದ್ದು ನಿಜನಾ?

Webdunia
ಶುಕ್ರವಾರ, 10 ಮೇ 2019 (11:36 IST)
ಮಂಡ್ಯ : ಚುನಾವಣೆಯ ವೇಳೆ ಚಲುವರಾಯಸ್ವಾಮಿ ಹಣ ಪಡೆದಿದ್ದು ದೇವರಾಣೆ ಸತ್ಯ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಗೌಡ, ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಜೆಡಿಎಸ್ ನಲ್ಲಿ ಇದ್ದುಕೊಂಡೇ ಕಾಂಗ್ರೆಸ್ ಅಭ್ಯರ್ಥಿ ರಮ್ಯಾಗೆ ಬೆಂಬಲಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದರು. ಮೈತ್ರಿ ಸರ್ಕಾರವನ್ನು ಪ್ರಶ್ನಿಸಲು ಇವರಿಗೆ ಏನು ನೈತಿಕತೆ ಇದೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಳ್ಳಿಗಳಿಗೆ ಹೋಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಖುದ್ದಾಗಿ ಹಣ ಹಂಚಿ, ನಿಖಿಲ್ ರನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಚಲುವರಾಯಸ್ವಾಮಿ ಬಳಿ ಹೋಗಿ ಟ್ಯೂಷನ್ ತೆಗೆದುಕೊಳ್ಳಬೇಕೆ? ಜನತೆ ಐದು ವರ್ಷ ನೆಮ್ಮದಿಯಾಗಿ ವಿಶ್ರಾಂತಿ ಪಡೆಯುವಂತೆ ತೀರ್ಪು ನೀಡಿದ್ದಾರೆ. ಜನತೆಯಿಂದ ತಿರಸ್ಕೃತಗೊಂಡ ಇವರು ಮುಂದಿನ ಚುನಾವಣೆಯಲ್ಲಿ ಗೆದ್ದು ಮಾತನಾಡಲಿ ಎಂದು ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments