Select Your Language

Notifications

webdunia
webdunia
webdunia
webdunia

ಮೇಕೆದಾಟು ಯೋಜನಾ ವರದಿ ಕುರಿತು ಮಾತುಕತೆ

ಮೇಕೆದಾಟು ಯೋಜನಾ ವರದಿ ಕುರಿತು ಮಾತುಕತೆ
bangalore , ಶುಕ್ರವಾರ, 1 ಜುಲೈ 2022 (20:24 IST)
ಮೇಕೆದಾಟು ಸಮಗ್ರ ಯೋಜನಾ ವರದಿಗೆ ಅನುನೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಮುಖ್ಯಮಂತ್ರಿಗಳ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್​ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ನೀಡಿದ್ದರು..ಕೇಂದ್ರ ಸಚಿವರನ್ನು ರಾಜ್ಯದ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿ ಗೌರವ ಸಲ್ಲಿಸಿದರು. ನಂತರ ಕೆಲಕಾಲ ರಾಜಕೀಯ ಹಾಗೂ ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು. ಕಾವೇರಿ ನದಿಗೆ ಮೇಕೆದಾಟು ಸ್ಥಳದಲ್ಲಿ ಸಮತೋಲನ ಜಲಾಶಯ ಕಟ್ಟುವ ಯೋಜನೆ ಬಗ್ಗೆ ಸಮಗ್ರವಾದ ವಿವರಣೆ ನೀಡಿದ ಸಿಎಂ, ಅಣೆಕಟ್ಟೆಯಲ್ಲಿ ಸಂಗ್ರಹವಾಗುವ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸುವುದಲ್ಲದೇ ಕುಡಿಯುವ ನೀರಿನ ಕೊರತೆ ಎದುರಿಸುತ್ತಿರುವ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಿಗೆ ನೀರು ಒದಗಿಸಲಾಗುತ್ತದೆ ಎಂದು ಸಿಎಂ ವಿವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

‘ಉದಯಪುರ ಹತ್ಯೆ ಹಿಂದೆ ಮದರಸಾ ಪ್ರಭಾವ’