Select Your Language

Notifications

webdunia
webdunia
webdunia
webdunia

ಮೇಕೆದಾಟು ಯೋಜನೆ ಕುರಿತು ತಮಿಳುನಾಡು ರಾಜಕೀಯ ಸ್ಟಂಟ್: ಸಿಎಂ ಬೊಮ್ಮಾಯಿ

webdunia
bengaluru , ಮಂಗಳವಾರ, 14 ಜೂನ್ 2022 (18:06 IST)
ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಅಂತಿಮ ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ ಎಂದರು.
ಕಾವೇರಿ ವಿಷಯದ ಮೇಲೆ ಈ ರೀತಿ ಹಲವಾರು ವರ್ಷಗಳಿಂದ ತಮಿಳುನಾಡು ಮಾಡಿದ್ದಾರೆ. ಇದು ಅದರ  ಭಾಗವಷ್ಟೇ. ಇದು ಕಾನೂನಿನ ಚೌಕಟ್ಟಿನಲ್ಲಿ ನಿಲ್ಲುವುದೂ ಇಲ್ಲ. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಖಂಡಿತವಾಗಿಯೂ ಪರಿಗಣಿಸುವುದಿಲ್ಲ. ನ್ಯಾಯ ಸಿಗುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಅವರು ತಿಳಿಸಿದರು. 
ಜೂನ್ 16 ರಂದು ತಮಿಳುನಾಡು, ಪುದುಚೇರಿ, ಕರ್ನಾಟಕ ಹಾಗೂ ಕೇರಳ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಯುವಕರಿಗೆ ಸೇನೆಯಲ್ಲಿ ಹೊಸ ಅವಕಾಶ