Webdunia - Bharat's app for daily news and videos

Install App

ತಮಿಳುನಾಡು ಬಂದ್‌‌ನಿಂದ ಕೆಟ್ಟ ಸಂದೇಶ ರವಾನೆ: ಯಡಿಯೂರಪ್ಪ

Webdunia
ಬುಧವಾರ, 31 ಆಗಸ್ಟ್ 2016 (16:19 IST)
ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದಿರುವುದರಿಂದ ನೆರೆಯ ರಾಜ್ಯವಾದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎನ್ನುವುದು ವಾಸ್ತವದ ಸಂಗತಿ. ಆದರೆ, ವಾಸ್ತವತೆಯನ್ನು ಅರಿಯದೆ ತಮಿಳುನಾಡು ಬಂದ್‌ಗೆ ಕರೆ ನೀಡಿರುವುದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ರಾಜ್ಯ ಸರಕಾರದ ನಿಲುವು ಸರಿಯಾಗಿದೆ. ರಾತ್ರಿ ವೇಳೆಯೂ ಕಣ್ಣು ಮುಚ್ಚಿ ನೀರು ಬಿಡುತ್ತಿಲ್ಲ. ಜಲಾಶಯಗಳಲ್ಲಿ ನೀರಿದ್ದರೆ ನಾವಾಗಿ ನೀರು ಬಿಡಲು ಸಿದ್ದರಿದ್ದೇವೆ. ಆದರೆ, ಜಲಾಶಯಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವಂತಹ ಸ್ಥಿತಿಯಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
 
ತಮಿಳುನಾಡಿನ ರೈತರು ಈಗಾಗಲೇ ರಾಜ್ಯದ ಜಲಾಶಯಗಳಿಗೆ ಭೇಟಿ ನೀಡಿ ಸತ್ಯಾಂಶವನ್ನು ಅರಿತುಕೊಂಡಿದ್ದಾರೆ.. ತದನಂತರವು ತಮಿಳುನಾಡು ಬಂದ್‌ ಕರೆ ನೀಡಿರುವುದು ವಿಪರ್ಯಾಸದ ಸಂಗತಿ ಎಂದರು.
 
ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾದಲ್ಲಿ ತಮಿಳುನಾಡಿಗೆ ನೀರು ಬಿಡಲು ಸಿದ್ದರಿದ್ದೇವೆ. ಆದರೆ, ಗೊಂದಲ ಸೃಷ್ಟಿಸುವುದು ಬೇಡ ಎಂದು ಉಭಯ ರಾಜ್ಯಗಳ ಜನತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ಯಾಬ್ಲೆಟ್ ತೆಗೆದುಕೊಳ್ಳದೇ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಉಪಾಯ

ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆನಾ: ಆರ್ ಅಶೋಕ್ ವಾಗ್ದಾಳಿ

ರಾಹುಲ್ ಗಾಂಧಿ ಜೊತೆ ಜಡ್ಜ್ ಸೆಲ್ಫೀ ನಿಜಾನಾ: ಇಲ್ಲಿದೆ ರಿಯಾಲಿಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments