ಶಾಸಕ ತನ್ವೀರ್ ಸೇಠ್ ರ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ಕಾರ್ಯಾಚರಣೆ ಕೈಗೊಂಡಿರೋ ಪೊಲೀಸರು ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಆರೋಪಿ ಪರಾಹ್ನನನ್ನು ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ವಶಕ್ಕೆ ಪಡೆದುಕೊಂಡಿದ್ದರು. ಇನ್ನೂ ನಾಲ್ವರನ್ನು ಬಂಧನ ಮಾಡಲಾಗಿದೆ.
ತನ್ವೀರ್ ಸೇಠ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರನ್ನು ಕೋಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶಾಸಕ ತನ್ವೀರ್ ಸೇಠ ಕುತ್ತಿಗೆಗೆ ಫರಾನ್ ಚಾಕು ಇರಿದಿದ್ದನು.