ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ವಿಚಾರ ಟಾಸ್ಕ್ ಪೋರ್ಸ್ ಜತೆ ಚರ್ಚಿಸದೆ ಕರ್ಪ್ಯೂ ಜಾರಿ ಮಾಡಿದ್ದಾರೆ ಎಂದು ಟಾಸ್ಕ್ ಪೋರ್ಸ್ ಸದಸ್ಯರು ಅಸಮಾಧಾನಗೊಂಡಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಅಧ್ಯಕ್ಷತೆಯ ಟಾಸ್ಕ್ ಪೋರ್ಸ್ ನಲ್ಲಿ ನೈಟ್ ಕರ್ಪ್ಯೂ ಜಾರಿ, ಸಮಯದ ಈ ಬಗ್ಗೆ ಚರ್ಚೆ ಮಾಡಿಲ್ಲ. ಟಾಸ್ಕ್ ಪೋರ್ಸ್ ಸಲಹೆ ಪಡೆಯದೆ ಸಮಯ ನಿಗದಿ ಬಗ್ಗೆ ಹಿರಿಯ ಸಚಿವರ ಮಧ್ಯೆ ಚರ್ಚೆ ನಡೆಯುತ್ತಿದೆ. ರಾಜ್ಯಸರ್ಕಾರದ ನಿರ್ಧಾರಕ್ಕೆ ಅಸಮಾಧಾಗೊಂಡು ಈ ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.