Publish Date: Wed, 02 Jan 2019 (18:24 IST)
Updated Date: Wed, 02 Jan 2019 (18:26 IST)
ಟಾಟಾ ಸಫಾರಿ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬೆಳಗ್ಗಿನ ಜಾವ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್ (45), ಶ್ರೀಲೇಖಾ(38), ಶ್ರೀಲತಾ (31) ಮೃತ ದುರ್ದೈವಿಗಳಾಗಿದ್ದಾರೆ.
ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬರುತ್ತಿದ್ದ ವೇಳೆ ಡಿವೈಡರ್ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.