Publish Date: Sun, 11 Jul 2021 (10:40 IST)
Updated Date: Sun, 11 Jul 2021 (10:41 IST)
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾವರ್ ಚಂದ್ ಪ್ರಮಾಣ ವಚನ ಸ್ವೀಕರಿಸಿದ್ದು, ಹೈಕೋರ್ಟ್ ಸಿ.ಜೆ. ಎ.ಎಸ್ ಓಖಾ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.
ನಿನ್ನೆಯೇ ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೆಹ್ಲೋಟ್ ನಿರ್ಗಮಿತ ರಾಜ್ಯಪಾಲ ವಜೂಬಾಯಿ ವಾಲಾರನ್ನು ಭೇಟಿ ಮಾಡಿದ್ದರು. ರಾಜ್ಯದ 19 ನೇ ರಾಜ್ಯಪಾಲರಾಗಿರುವ ಗೆಹ್ಲೋಟ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.