ತೆರಿಗೆ ಸಲಹೆಗಾರರ ದಿನ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಪ್ರವಾಸ

Webdunia
ಗುರುವಾರ, 3 ಅಕ್ಟೋಬರ್ 2019 (16:53 IST)
ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅ.5, 6 ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ.

ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ವತಿಯಿಂದ ಪ್ರಪ್ರಥಮ ಬಾರಿಗೆ ತೆರಿಗೆ ಸಲಹೆಗಾರ ದಿನವನ್ನು ಅ.5 ಮತ್ತು 6 ರಂದು ಹುಬ್ಬಳ್ಳಿ ನಗರದ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ‌. ಈ ಕಾರ್ಯಕ್ರಮಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಲಿದ್ದಾರೆ. ಹೀಗಂತ ಎಸ್.ನಂಜುಂಡ ಪ್ರಸಾದ ಹೇಳಿದ್ದಾರೆ.

ತೆರಿಗೆ ಸಲಹೆಗಾರರಿಗೆ ಯಾವುದೇ ದಿನ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಅ.5 ರಂದು ಅಧಿಕೃತವಾಗಿ ಸಲಹೆಗಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅ. 5 ರಂದು ತೆರಿಗೆ ಸಲಹೆಗಾರರ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ, ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಅ.6 ರಂದು ತೆರಿಗೆ ಸಲಹೆಗಾರರ ಸಂಸ್ಥಾಪಕರ ದಿನಾಚರಣೆ ಮಾಡಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲಿ ಶಾಸಕ ಹೆಚ್.ಕೆ.ಪಾಟೀಲ್ ಆಗಮಿಸುತ್ತಿದ್ದು, ಅಂದು ತೆರಿಗೆ ಸಲಹೆಗಾರರನ್ನು ಸನ್ಮಾನಿಸಲಾಗುವುದು. ಅಲ್ಲದೇ ಸಂಘದ ಇ - ಪತ್ರಿಕೆ, ಅಂತರ್ಜಾಲ ತಾಣ, ಸಂಘದ ಲಾಂಛನವನ್ನು ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments