ರಾಜ್ಯಗಳ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿ ಹೆಚ್ಚಿಸಲಾಗಿದೆ ಎಂದು ಇಂದಿನ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ಹಿಂದೆ ಇದ್ದ ಶೇ.10ರಷ್ಟಿನ ತೆರಿಗೆ ಕಡಿತದ ಮಿತಿಯನ್ನು ಶೇ.14ಕ್ಕೆ ಏರಿಕೆ ಮಾಡಲಾಗಿದ್ದು, ಕೇಂದ್ರ ಸರ್ಕಾರಿ ನೌಕರರ ತೆರಿಕೆ ಕಡಿತದ ಮಿತಿಯನ್ನು ಶೇ.18ರಿಂದ ಶೇ.15ಕ್ಕೆ ಇಳಿಕೆ ಮಾಡಲಾಗಿದೆ.
ಡಿಜಿಟಲ್ ಆಸ್ತಿ ವರ್ಗಾವಣೆಯಿಂದ ಗಳಿಸಿದ ಆದಾಯದ ಮೇಲೆ ಶೇ.30ರಷ್ಟು ತೆರಿಗೆ ವಿಧಿಸಲಾಗಿದೆ ಎಂದರು.