Select Your Language

Notifications

webdunia
webdunia
webdunia
webdunia

ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಟಿಡಿಪಿಯ ಸತ್ಯವೇಡು ಶಾಸಕ ಅಮಾನತು

Sexual Abuse

Sampriya

ಅಮರಾವತಿ , ಶುಕ್ರವಾರ, 6 ಸೆಪ್ಟಂಬರ್ 2024 (17:37 IST)
Photo Courtesy X
ಅಮರಾವತಿ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಟಿಡಿಪಿ ಶಾಸಕ ಕೋನೇಟಿ ಆದಿಮೂಲಂ ಅವರನ್ನು ತೆಲುಗು ದೇಶಂ ಪಾರ್ಟಿಯ ರಾಜ್ಯಾಧ್ಯಕ್ಷ ಪಿ. ಶ್ರೀನಿವಾಸ ರಾವ್ ಅಮಾನತು ಮಾಡಿದ್ದಾರೆ.

ಆದಿಮೂಲಂ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪರಿಶಿಷ್ಟ ಮೀಸಲು ಕ್ಷೇತ್ರ ಸತ್ಯವೇಡು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

ಆದಿಮೂಲಂ ನನನ್ನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಅದಲ್ಲದೆ ಖಾಸಗಿ ಕ್ಷಣಗಳ ವಿಡಿಯೋ ಗುರುವಾರ ಬಹಿರಂಗವಾದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.

ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಆದಿಮೂಲಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಟಿಡಿಪಿ ಹೇಳಿಕೆಯಲ್ಲಿ ತಿಳಿಸಿದೆ.

ಆದಿಮೂಲಂ 2019ರಲ್ಲಿ ಸತ್ಯವೇಡು ಕ್ಷೇತ್ರದಿಂದ ವೈಎಸ್ ಆರ್ ಕಾಂಗ್ರೆಸ್ ನಿಂದ ಗೆದ್ದಿದ್ದರು. ಆದರೆ, ಈ ಬಾರಿ ಸ್ಪರ್ಧಿಸಲು ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಟಿಕೆಟ್ ನಿರಾಕರಿಸಿದ್ದರಿಂದ ಟಿಡಿಪಿ ಸೇರಿ ಜಯ ಗಳಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯ ಭಾಗ್ಯಲಕ್ಷ್ಮಿ ಯೋಜನೆಯಲ್ಲೂ ಹಗರಣದ ಆರೋಪ