ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿ 58 ವರ್ಷದ ಶಿಕ್ಷಕನನ್ನು ಶಂಕರನಾರಾಯಣ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
 
									
										
								
																	
	ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುವುದು, ಮೈ ಮುಟ್ಟಿ ಕಪಿಚೇಷ್ಟೆ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.
 
									
								
			        							
								
																	
	 
	ಜಿಲ್ಲೆಯ ಕುಂದಾಪುರ ತಾಲೂಕಿನ ಶಾಲೆಯೊಂದರ ಶಿಕ್ಷಕನಾಗಿರುವ ಆರೋಪಿಯ ವಿರುದ್ಧ ಶಿಕ್ಷಣ ಇಲಾಖೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಆರೋಪಿ ಶಿಕ್ಷಕನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  
 
									
										
								
																	
	 
	ಹಿಂದೆಯೂ ಆರೋಪಿ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪವಿತ್ತು ಎನ್ನಲಾಗಿದೆ.
 
									
											
							                     
							
							
			        							
								
																	
	
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.