Publish Date: Sun, 05 Nov 2023 (09:20 IST)
Updated Date: Sun, 05 Nov 2023 (09:22 IST)
ದಾವಣಗೆರೆ: ಏಳು ವರ್ಷದ ಬಾಲಕಿ ಮೇಲೆ ಕಾಮುಕ ಶಿಕ್ಷಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕ ಈ ಕೃತ್ಯವೆಸಗಿದ್ದಾನೆ. ಹಲವಾರು ಬಾರಿ ಬಾಲಕಿಯನ್ನು ಲೈಂಗಿಕವಾಗಿ ಶೋಷಣೆಗೊಳಪಡಿಸಿದ್ದು ಬೆಳಕಿಗೆ ಬಂದಿದೆ. ಆದರೆ ನಡೆದಿದ್ದನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ.
ಇದೀಗ ಬಾಲಕಿ ಅನಾರೋಗ್ಯಕ್ಕೆ ತುತ್ತಾದಾಗ ಘಟನೆ ಬೆಳಕಿಗೆ ಬಂದಿದೆ. ಪೋಷಕರು ಕಾಮುಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಆರೋಪಿ ವಿರುದ್ಧ ಪೋಸ್ಕೋ ಕಾಯಿದೆಯಡಿ ದೂರು ದಾಖಲಿಸಲಾಗಿದೆ.