Publish Date: Wed, 05 Sep 2018 (17:33 IST)
Updated Date: Wed, 05 Sep 2018 (17:36 IST)
ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ಸಂಭ್ರಮ. ಈ ಸಡಗರದ ದಿನವನ್ನು ದಾವಣಗೆರೆಯಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಹಾಗೂ ಶಾಸಕ ಎಸ್. ಎ. ರವೀಂದ್ರನಾಥ್ ಕಾರ್ಯಕ್ರಮ ಉದ್ಘಾಟಿಸಿದರು.
ಶಿಕ್ಷಕರ ದಿನಾಚರಣೆ ಸಂಭ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಿಗೆ ಸನ್ಮಾನಿಸಿ ಗೌರವಿಸಲಾಯಿತು.