ಪ್ರಿಯಕರನಿಂದಲೇ ಸುಟ್ಟು ಕರಕಲಾದ ಯುವತಿ

Webdunia
ಬುಧವಾರ, 9 ಮಾರ್ಚ್ 2022 (09:00 IST)
ಮಂಡ್ಯ: ಕಾಲೇಜಿಗೆ ಹೋಗುತ್ತೇನೆಂದು ಮನೆ ಬಿಟ್ಟಿದ್ದ ಯುವತಿ ಅಜ್ಞಾತ ಸ್ಥಳದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಕರನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

ಕಾಲೇಜಿಗೆ ಹೋಗುತ್ತೇನೆಂದು ಮನೆ ಬಿಟ್ಟಿದ್ದ ಯುವತಿ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಯುವತಿ ನಾಪತ್ತೆಯಾದ ದಿನವೇ ಆಕೆಯನ್ನು ಪ್ರೀತಿಸುತ್ತಿದ್ದ ಯುವಕನೂ ನಾಪತ್ತೆಯಾಗಿದ್ದ. ಹೀಗಾಗಿ ಮನೆಯವರು ಆತನ ಮೇಲೆ ಕಿಡ್ನ್ಯಾಪ್ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಈ ನಡುವೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವತಿಯ ದೇಹ ಪತ್ತೆಯಾಗಿತ್ತು. ಈ ಮೃತದೇಹವನ್ನು ಅನಾಥ ಶವವೆಂದು ಪೊಲೀಸರೇ ಅಂತ್ಯ ಸಂಸ್ಕಾರ ನಡೆಸಿ, ಯುವತಿ ಮೇಲಿದ್ದ ಉಂಗುರ, ಓಲೆಯನ್ನು ಸಂತ್ರಸ್ತ ಯುವತಿಯ ಪೋಷಕರಿಗೆ ಕಳುಹಿಸಿ ಗುರುತಿಸಲು ಕೇಳಿದ್ದಾರೆ. ಆಭರಣ ನೋಡಿದರೆ ಪೋಷಕರಿಗೆ ಇದು ತಮ್ಮ ಮಗಳದ್ದೇ ಎಂದು ಗೊತ್ತಾಗಿದೆ. 

ಎಲ್ಲಾ ಸಾಕ್ಷ್ಯಗಳಿದ್ದೂ ಪೊಲೀಸರು ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ಅತ್ತ ಆರೋಪಿಯೂ ನಾಪತ್ತೆಯಾಗಿದ್ದಾನೆ ಎಂದು ಆತನ ಮನೆಯವರೇ ಆಪಾದಿಸಿದ್ದಾರೆ. ಇದೀಗ ಆರೋಪಿಗೆ ಶಿಕ್ಷೆಯಾಗಬೇಕೆಂದು ಯುವತಿಯ ಮನೆಯವರು ಹೋರಾಡುವ ಪರಿಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments