ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹೀಗಾಗಿ ಸಮೀಕ್ಷೆ ಬಹಿಷ್ಕರಿಸಿ ಎಂದು ಸಂಸದ ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ನಾನು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ. ನನಗೆ ನಮ್ಮ ಮಾಹಿತಿ ಸುರಕ್ಷಿತವಾಗಿರುತ್ತದೆ ಎಂದು ನಂಬಿಕೆಯಿಲ್ಲ. ಸರ್ಕಾರದ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.
ಜಾತಿಗಳ ನಡುವೆ ಬಿರುಕು ಮೂಡಿಸಲು ಈ ಸಮೀಕ್ಷೆ ಮಾಡುತ್ತಿದ್ದಾರೆ. ಇದರಲ್ಲಿ ನಿಮ್ಮ ಮಾಹಿತಿಯೂ ಸುರಕ್ಷಿತವಾಗಿರಲ್ಲ. ಈ ಸಮೀಕ್ಷೆಯಲ್ಲಿ ಯಾರೂ ಪಾಲ್ಗೊಳ್ಳಬೇಡಿ ಎಂದು ಅವರು ಬಹಿಷ್ಕರಿಸಲು ಕರೆ ನೀಡಿದ್ದಾರೆ.
ಈಗಾಗಲೇ ಹೈಕೋರ್ಟ್ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ ಸಮೀಕ್ಷೆಯಲ್ಲಿ ಭಾಗವಹಿಸಬೇಕೇ ಬೇಡವೇ ಎನ್ನುವುದು ಆಯಾ ವ್ಯಕ್ತಿಗಳ ಇಚ್ಛೆಗೆ ಬಿಟ್ಟ ವಿಚಾರವಾಗಿರುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಒತ್ತಾಯ ಮಾಡುವಂತಿಲ್ಲ ಎಂದು ಹೇಳಿತ್ತು.