ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

Krishnaveni K
ಶನಿವಾರ, 27 ಸೆಪ್ಟಂಬರ್ 2025 (17:09 IST)
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹೀಗಾಗಿ ಸಮೀಕ್ಷೆ ಬಹಿಷ್ಕರಿಸಿ ಎಂದು ಸಂಸದ ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ನಾನು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ. ನನಗೆ ನಮ್ಮ ಮಾಹಿತಿ ಸುರಕ್ಷಿತವಾಗಿರುತ್ತದೆ ಎಂದು ನಂಬಿಕೆಯಿಲ್ಲ. ಸರ್ಕಾರದ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.

ಜಾತಿಗಳ ನಡುವೆ ಬಿರುಕು ಮೂಡಿಸಲು ಈ ಸಮೀಕ್ಷೆ ಮಾಡುತ್ತಿದ್ದಾರೆ. ಇದರಲ್ಲಿ ನಿಮ್ಮ ಮಾಹಿತಿಯೂ ಸುರಕ್ಷಿತವಾಗಿರಲ್ಲ. ಈ ಸಮೀಕ್ಷೆಯಲ್ಲಿ ಯಾರೂ ಪಾಲ್ಗೊಳ್ಳಬೇಡಿ ಎಂದು ಅವರು ಬಹಿಷ್ಕರಿಸಲು ಕರೆ ನೀಡಿದ್ದಾರೆ.

ಈಗಾಗಲೇ ಹೈಕೋರ್ಟ್ ಜಾತಿಗಣತಿ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ ಸಮೀಕ್ಷೆಯಲ್ಲಿ ಭಾಗವಹಿಸಬೇಕೇ ಬೇಡವೇ ಎನ್ನುವುದು ಆಯಾ ವ್ಯಕ್ತಿಗಳ ಇಚ್ಛೆಗೆ ಬಿಟ್ಟ ವಿಚಾರವಾಗಿರುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಒತ್ತಾಯ ಮಾಡುವಂತಿಲ್ಲ ಎಂದು ಹೇಳಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಭಾರತದಲ್ಲಿನ ಪ್ರೇಮಿಗಾಗಿ ಅಮೆರಿಕದಲ್ಲಿ ಪತ್ನಿಯನ್ನು ಕೊಂದ ವ್ಯಕ್ತಿ

ಗೃಹಜ್ಯೋತಿ ಯೋಜನೆಗೆ ಆಧಾರ್ ಮತ್ತು ಮೊಬೈಲ್ ಲಿಂಕ್ ಮಾಡುವುದು ಹೇಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments