Publish Date: Fri, 09 Sep 2022 (09:11 IST)
Updated Date: Thu, 08 Sep 2022 (23:15 IST)
ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಮಾಡುವುದಕ್ಕೆ ಕೆಲಸ ಇಲ್ಲ. ಫೇಕ್ ಇಶ್ಯು ಕ್ರಿಯೇಟ್ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.
ಹೋಟೆಲಿನಲ್ಲಿ ದೋಸೆ ಸವಿಯುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ.
ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದರು.
ನಮ್ಮ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ಬಸ್ ಉದ್ಘಾಟನೆ ಇತ್ತು ಅಂದ್ರೆ ಅದಕ್ಕೂ ಹೋಗ್ತೀವಿ. ದೋಸೆ ಅಂಗಡಿ ಉದ್ಘಾಟನೆಗೆ ಕರೆಯುತ್ತಾರೆ.