Publish Date: Fri, 20 Jan 2023 (06:54 IST)
Updated Date: Fri, 20 Jan 2023 (08:56 IST)
ಚಿಕ್ಕಮಗಳೂರು : ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಡೋರ್ ಓಪನ್ ಮಾಡಿಲ್ಲ. ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು.
ಅವರು ಸಂಸದರು, ಬುದ್ಧಿವಂತರು, ಜವಾಬ್ದಾರಿ ಸ್ಥಾನದಲ್ಲಿದ್ದಾರೆ. ಅವರು ಡೋರ್ ಓಪನ್ ಮಾಡಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ನಡೆಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮರ್ಥಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಉತ್ಸವದ ಹಿನ್ನೆಲೆ ಆಗಮಿಸಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರು ವಿಮಾನ ನಿಲ್ದಾಣದಲ್ಲಿ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ, ಅವರು ಡೋರ್ ಓಪನ್ ಮಾಡಿಲ್ಲ. ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು ಎಂದು ಸಮರ್ಥಿಸಿಕೊಂಡರು.