Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ– ರಾಮಲಿಂಗಾರೆಡ್ಡಿ ಆರೋಪ

ಕದ್ದಾಲಿಕೆ
ಬೆಂಗಳೂರು , ಗುರುವಾರ, 11 ಜನವರಿ 2018 (14:01 IST)
ರಾಜ್ಯ ಸರ್ಕಾರದ ಕೆಲ ಸಚಿವರ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
 
ಮಾಜಿ ಪ್ರಧಾನಿ ಲಾಲ್‍ಬಹುದ್ದೂರ್ ಶಾಸ್ತ್ರಿರವರ 52ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಉದ್ಯಾನವನದಲ್ಲಿನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದವರು ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಬಹಳ ಹಿಂದಯೇ ಹೇಳಿದ್ದೆ. ಕೇಂದ್ರ ಸರ್ಕಾರವಲ್ಲದೇ ಇನ್ಯಾರು ಮಾಡಲು ಸಾಧ್ಯ ಎಂದಿದ್ದಾರೆ.
 
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೂರವಾಣಿ ಕದ್ದಾಲಿಕೆ ನಿರಂತರವಾಗಿ ನಡೆಯುತ್ತಿದೆ. ಕಾನೂನು ಪ್ರಕಾರ ಒಬ್ಬರ ದೂರವಾಣಿ ಕದ್ದಾಲಿಸುವುದು ತಪ್ಪು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಗ್ರವಾದಿಗಳು ಎಂದು ಹೇಳಿಲ್ಲ– ಉಲ್ಟಾ ಹೊಡೆದ ಸಿದ್ದರಾಮಯ್ಯ