Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ತಾಪಮಾನ ಹೆಚ್ಚುವ ಸಾಧ್ಯತೆ

Webdunia
ಬುಧವಾರ, 5 ಏಪ್ರಿಲ್ 2023 (15:23 IST)
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದೆ. ಬಿರು ಬೇಸಿಗೆಯಲ್ಲೂ ಕೆಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ನಡುವೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ದಿನ ಕಳೆದ ಹಾಗೆ ಬೆಂಗಳೂರಿನ ವಾತಾವರಣದಲ್ಲೂ ಬದಲಾವಣೆಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಹೀಟ್ ವೇವ್ ಆತಂಕ ಶುರುವಾಗಿದೆ. ಕಳೆದ ಶನಿವಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38-39ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾದರೆ, ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಇತ್ತು. ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದಾರೆ. ಸದ್ಯ ಬೆಂಗಳೂರಿನ ತಾಪಮಾನ ಮುಂಬರುವ ತಿಂಗಳುಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ವಾಯವ್ಯ ಮತ್ತು ಪರ್ಯಾಯ ದ್ವೀಪ ಪ್ರದೇಶಗಳನ್ನು ಹೊರತುಪಡಿಸಿದರೆ ಭಾರತದ ಬಹುತೇಕ ಪ್ರದೇಶಗಳಲ್ಲಿ ಏಪ್ರಿಲ್​​ನಿಂದ ಜೂನ್ ತಿಂಗಳ ಅಂತ್ಯದವರೆಗೆ ಹೆಚ್ಚಿನ ತಾಪಮಾನ ವರದಿಯಾಗುವ ನಿರೀಕ್ಷೆ ಇದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದೆ. ಜನರು ಆರೋಗ್ಯದ ಮೇಲೆ ಹೆಚ್ಚು ಗಮನಹರಿಸಬೇಕು. ತಾಪಮಾನ ಹೆಚ್ಚಾದಂತೆ ಜನರಿಗೆ ಊತ, ತಲೆನೋವು, ವಾಕರಿಕೆ, ನಿರ್ಜಲೀಕರಣ, ಸುಸ್ತು, ವಾಂತಿ ಮತ್ತು ಬೆವರು ಸೇರಿ ಇತರೆ ಆರೋಗ್ಯ ಸಮಸ್ಯೆಗಳು ಕಾಡಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments