Webdunia - Bharat's app for daily news and videos

Install App

ಡಿ.31ರ ತಾಪಮಾನ ವರದಿ: ಇನ್ನೂ ಒಂದು ವಾರ ವಿಪರೀತ ಚಳಿ, ಭಾರೀ ಮಳೆಗೆ ತಮಿಳುನಾಡು ತತ್ತರ

Webdunia
ಶುಕ್ರವಾರ, 31 ಡಿಸೆಂಬರ್ 2021 (19:29 IST)
ಬೆಂಗಳೂರು:- ಡಿಸೆಂಬರ್ 31: 2022 ಬರಲು ಇನ್ನು ಕೇವಲ ಒಂದೇ ದಿನ ಬಾಕಿಯಿದ್ದು, ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿ ಹೆಚ್ಚಾಗಿದೆ. ಜನವರಿ ಮೊದಲ ವಾರದವರೆಗೂ ರಾಜ್ಯಾದ್ಯಂತ ಚಳಿ ಮುಂದುವರೆಯಲಿದೆ. ಇದರ ನಡುವೆ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಅಕಾಲಿಕವಾಗಿ ಭಾರೀ ಮಳೆಯಾಗುತ್ತಿದೆ.
ರಾಜ್ಯದಲ್ಲಿ ಎಂದಿನಂತೆ ಇಂದು ಚಳಿ ಜೊತೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಇನ್ನುಳಿದಂತೆ ರಾಜ್ಯದಲ್ಲಿ ಚಳಿ ಪ್ರಮಾಣ ವಿಪರೀತವಾಗಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಪುದುಚೇರಿ ಮತ್ತು ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರವರಿವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
 
"ರಾಜ್ಯದಲ್ಲಿ ತಾಪಮಾನ ವರದಿ:-"
 
ಬೆಂಗಳೂರು 26-18, ಮೈಸೂರು 28-19, ಚಾಮರಾಜನಗರ 28-19, ರಾಮನಗರ 28-19, ಮಂಡ್ಯ 28-19, ಬೆಂಗಳೂರು ಗ್ರಾಮಾಂತರ 26-18, ಚಿಕ್ಕಬಳ್ಳಾಪುರ 23-17, ಕೋಲಾರ 25-18, ಹಾಸನ 26-17, ಚಿಕ್ಕಮಗಳೂರು 26-17, ದಾವಣಗೆರೆ 28-19, ಶಿವಮೊಗ್ಗ 29-19, ಕೊಡಗು 27-18, ತುಮಕೂರು 26-18, ಉಡುಪಿ 33-24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಗಳೂರು 33-24, ಉತ್ತರ ಕನ್ನಡ 31-20, ಧಾರವಾಡ 28-17, ಹಾವೇರಿ 29-19, ಹುಬ್ಬಳ್ಳಿ 29-18, ಬೆಳಗಾವಿ 29-17, ಗದಗ 28-18, ಕೊಪ್ಪಳ 29-19, ವಿಜಯಪುರ 29-17, ಬಾಗಲಕೋಟ 30-18, ಕಲಬುರಗಿ 31-18, ಬೀದರ್ 28-16, ಯಾದಗಿರಿ 31-18, ರಾಯಚೂರ 31-18, ಬಳ್ಳಾರಿ 29-19 ಡಿಗ್ರಿ ಸೆಲ್ಸಿಯಸ್ ಇರಲಿದೆ.
 
"ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ"
 
ಕಡಲತೀರದ ಮಾರುತಗಳು ತಮಿಳುನಾಡಿನ ಕರಾವಳಿಯ ಮೇಲೆ ದಾಳಿ ಮಾಡಲು ಸಿದ್ಧವಾಗಿದ್ದು, ಇದರಿಂದ ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಮತ್ತು ಜನವರಿ 1ರಂದು ತಮಿಳುನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಭಾರತೀಯ ಹವಾಮಾನ ಇಲಾಖೆ ಜನವರಿ 1ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದು (ಶುಕ್ರವಾರ) ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಶನಿವಾರದಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ.
ಚೆನ್ನೈನಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಶೀತಗಾಳಿಯ ಜೊತೆಗೆ ಹಗುರ ಮಳೆಯೂ ಸುರಿಯುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದಿನಿಂದ (ಶುಕ್ರವಾರ) ಜನವರಿ 2ರ ಭಾನುವಾರದವರೆಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಜನವರಿ 2ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಾದ್ಯಂತ ನಿನ್ನೆ ಸಂಜೆ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿದೆ. ಇಂದಿನಿಂದ ಜನವರಿ 2 ರವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತ ಗಾಳಿ ಉಂಟಾಗಲಿದೆ.
"ದಟ್ಟವಾದ ಮಂಜು ಬೀಳುವ ಸಾಧ್ಯತೆ"
ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಇಂದು ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಹವಾಮಾನ ಸಂಸ್ಥೆ ಪ್ರಕಾರ, ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದಿನಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ.
ಗುರುವಾರ ಸುರಿದ ಭಾರಿ ಮಳೆಗೆ ಚೆನ್ನೈನ ಹಲವು ಪ್ರದೇಶಗಳಲ್ಲಿ ಜಲಾವೃತವಾಗಿದೆ. ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಬಿಡುಗಡೆ ಮಾಡಿದ ಮಳೆಯ ಮಾಹಿತಿಯ ಪ್ರಕಾರ, ಚೆನ್ನೈನಲ್ಲಿ 13 ಸೆಂ.ಮೀ ಮಳೆ ದಾಖಲಾಗಿದ್ದರೆ, ನುಂಗಂಬಾಕ್ಕಂನಲ್ಲಿ 12 ಸೆಂ.ಮೀ ಮಳೆಯಾಗಿದೆ. ಇಂದು ಕಡಲೂರು, ವಿಲ್ಲುಪುರಂ ಮತ್ತು ಮೈಲಾಡುತುರೈ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆ, ಗುಡುಗುಸಹಿತ ಬಿರುಗಾಳಿ ಸಂಭವಿಸುವ ಸಾಧ್ಯತೆಯಿದೆ. ಕರಾವಳಿ ತಮಿಳುನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments