ದೇವಾಲಯಗಳ ಆಸ್ತಿಯನ್ನು ಸಂರಕ್ಷಿಸಲು ಪ್ರಥಮಾದ್ಯತೆ ನೀಡಿ: ಸಚಿವ ಶ್ರೀನಿವಾಸ ಪೂಜಾರಿ

Webdunia
ಗುರುವಾರ, 1 ಜುಲೈ 2021 (15:52 IST)
ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಮುಜರಾಯಿ ದೇವಾಲಯಗಳ ಆಸ್ತಿಗಳನ್ನು ಯಾವುದೇ ಲೋಪಗಳಿಗೆ ಎಡೆಮಾಡಿಕೊಡದಂತೆ ಸಂರಕ್ಷಿಸುವುದು ಕಾರ್ಯನಿರ್ವಾಹಣ ಅಧಿಕಾರಿಗಳ ಜವಾಬ್ದಾರಿ ಎಂದು ಅಧಿಕಾರಿಗಳಿಗೆ ಹಿಂದುಳಿದ  ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮರಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದೇವಾಲಯಗಳ ಸರ್ವೇ ಕಾರ್ಯ ಕೈಗೊಂಡು, ಗಡಿ ಗುರುತಿಸಿ, ಬೇಲಿ ಹಾಕಿ ರಕ್ಷಿಸಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
 
ಒತ್ತುವರಿ ಆಗಿರುವ ಹಲವಾರು ದೇವಾಲಯಗಳ ಜಾಗವನ್ನು ತೆರವುಗೊಳಿಸಿ, ಸ್ಥಳೀಯವಾಗಿ ಯಾವುದೇ ಅಡೆತಡೆಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
 
ಈ ಕಾರ್ಯದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
 
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪಿ. ಆರ್ ರಮೇಶ್, ರಮೇಶ್ ಗೌಡ, ರವಿಕುಮಾರ್ ಹಾಗೂ ಅ. ದೇವೇಗೌಡ ಅವರು, ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್, ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments