Webdunia - Bharat's app for daily news and videos

Install App

ಭೀಕರ ಅಪಘಾತ : ಚಾಲಕ ಸೇರಿ ಇಬ್ಬರು ಸಾವು, 34 ಪ್ರಯಾಣಿಕರಿಗೆ ಗಾಯ

Webdunia
ಶುಕ್ರವಾರ, 12 ಮೇ 2023 (16:58 IST)
ಶಿವಮೊಗ್ಗ : 2 ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಬಸ್ಗಳಲ್ಲಿದ್ದ 34 ಪ್ರಯಾಣಿಕರು ಗಾಯಗೊಂಡಿರುವ ಭೀಕರ ಘಟನೆ ಶಿವಮೊಗ್ಗದ ಚೋರಡಿ ಸಮೀಪ ನಡೆದಿದೆ.

ಚೋರಡಿ ಸಮೀಪದ ಕುಮುದ್ವತಿ ಸೇತುವೆ ಮೇಲೆ ಶಿವಮೊಗ್ಗದಿಂದ ಆಯನೂರು ಮಾರ್ಗವಾಗಿ ಶಿಕಾರಿಪುರಕ್ಕೆ ತೆರಳುತ್ತಿದ್ದ ಬಸ್ ಹಾಗೂ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದ ರಭಸಕ್ಕೆ ಎರಡು ಬಸ್ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೊಂದು ಬಸ್ನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಅಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2 ಬಸ್ಗಳಲ್ಲಿ ಸುಮಾರು 70 ರಿಂದ 80 ಪ್ರಯಾಣಿಕರಿದ್ದರು ಎನ್ನಲಾಗಿದೆ.
ಅಪಘಾತ ಸಂಭವಿಸಿದ ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಸಂಸದ ಬಿವೈ ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಶಾಸಕ ಅಶೋಕ್ ನಾಯ್ಕ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದ್ದಾರೆ.

ಬಸ್ಗಳ ಮುಖಾಮುಖಿ ಡಿಕ್ಕಿ ವಿಚಾರಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದು, ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಬಸ್ ಚಾಲಕ ತಿಪ್ಪೆಸ್ವಾಮಿ, ಮತ್ತೊಬ್ಬ ಪ್ರಯಾಣಿಕ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 34 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments