ಭೀಕರ ಅಪಘಾತ, 9 ಮಂದಿ ದುರ್ಮರಣ

Webdunia
ಭಾನುವಾರ, 16 ಅಕ್ಟೋಬರ್ 2022 (16:14 IST)
ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ KSRTC ಬಸ್ ನಡುವೆ ಭೀಕರ ಅಪಘಾತವಾಗಿರುವ ಘಟನೆ ಹಾಸನದ ಅರಸೀಕೆರೆ ತಾಲ್ಲೂಕಿನ ಬಾಣವಾರದ ಗಾಂಧಿನಗರದಲ್ಲಿ ನಡೆದಿದೆ.‌ ಫರಿಣಾಮ ಸ್ಥಳದಲ್ಲಿಯೇ 9 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಹಳ್ಳಿಕೆರೆ ಗ್ರಾಮದ 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿ ವಾಹನದ ಹಿಂದೆ ಸಾರಿಗೆ ಬಸ್ ಬರುತ್ತಿತ್ತು. ಶಿವಮೊಗ್ಗ ಕಡೆಯಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಯಮಸ್ವರೂಪಿ ಹಾಲಿನ ಲಾರಿ ಚಾಲಕನಿಗೆ ತಿರುವು ಗೊತ್ತಾಗದೆ ಎರಡು ವಾಹನಗಳು ಬರುತ್ತಿದ್ದ ಕಡೆಗೆ ಏಕಮುಖವಾಗಿ ಸಂಚಾರ ನಡೆಸಿದ್ದಾನೆ. ಈ ವೇಳೆ ವೇಗವಾಗಿದ್ದ ಟಿಟಿ ವಾಹನ ಹಾಲಿನ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಇದೇ ವಾಹನದ ಹಿಂಬದಿಯಿದ್ದ ಸಾರಿಗೆ ಬಸ್ ಪಲ್ಟಿಯಾಗಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮೂರು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ.‌ ಈ ಸರಣಿ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 12 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. 10 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments