ಮಂಡ್ಯ : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
									
			
			 
 			
 
 			
			                     
							
							
			        							
								
																	ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಜರುಗಿದೆ. ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೇಮಂತ್, ಶರತ್, ನವೀನ್ ಹಾಗೂ ಇನ್ನೋರ್ವ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 
									
										
								
																	ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನ ಮುಂದೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.