Publish Date: Mon, 07 Aug 2017 (15:26 IST)
Updated Date: Mon, 07 Aug 2017 (15:28 IST)
ದೇಶದ ವಾಣಿಜ್ಯ ನಗರಿಯಾದ ಮುಂಬೈನಲ್ಲಿ ದಾಳಿ ನಡೆಸುವ ಬಗ್ಗೆ ಉಗ್ರರು ಸಂಚು ರೂಪಿಸಿರುವುದು ಬಹಿರಂಗವಾಗಿದೆ.
ಕೆಲ ಉಗ್ರರು ಮುಂಬೈನಲ್ಲಿ ಅಡಗಿದ್ದು ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎನ್ನುವ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದ ಪೊಲೀಸರು, ನಗರದಾದ್ಯಂತ ಭಾರಿ ಪ್ರಮಾಣದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಪೊಲೀಸರು ಬಂಧಿತ ಉಗ್ರರನ್ನು ವಿಚಾರಣೆಗೊಳಪಡಿಸಿದಾಗ, ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಿದ್ದತೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಉಗ್ರರಿಂದ ಮಾಹಿತಿ ಪಡೆದ ಪೊಲೀಸರು ಮತ್ತಷ್ಟು ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಗಸ್ಟ್ 15 ರೊಳಗೆ ದೇಶದಲ್ಲಿ ಭಾರಿ ಪ್ರಮಾಣದಲ್ಲಿ ಉಗ್ರರ ದಾಳಿ ನಡೆಸಲು ಜಾಗತಿಕ ಉಗ್ರಗಾಮಿ ಸಂಘಟನೆಯಾದ ಲಷ್ಕರ್-ಎ-ತೊಯಿಬಾ ಸಂಚು ನಡೆಸಿರುವುದನ್ನು ಗುಪ್ತಚರ ಇಲಾಖೆ ಪತ್ತೆ ಹಚ್ಚಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.