Select Your Language

Notifications

webdunia
webdunia
webdunia
webdunia

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

CM Siddaramai, Pahalgam Terror Attack, Santhosh Laad

Sampriya

ಬೆಂಗಳೂರು , ಬುಧವಾರ, 23 ಏಪ್ರಿಲ್ 2025 (17:54 IST)
ಬೆಂಗಳೂರು: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ
ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ.

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು