Webdunia - Bharat's app for daily news and videos

Install App

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Sampriya
ಬುಧವಾರ, 23 ಏಪ್ರಿಲ್ 2025 (17:54 IST)
ಬೆಂಗಳೂರು: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ
ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ.

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

Robert Vadra: ಮುಸ್ಲಿಮರಿಗೆ ದೇಶದಲ್ಲಿ ತೊಂದರೆಯಾಗ್ತಿದೆ, ಅದಕ್ಕೇ ದಾಳಿ ಮಾಡಿದ್ದಾರೆ ಎಂದ ರಾಬರ್ಟ್ ವಾದ್ರಾ: ಭಾರೀ ಟೀಕೆ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

ಮುಂದಿನ ಸುದ್ದಿ
Show comments