Select Your Language

Notifications

webdunia
webdunia
webdunia
webdunia

ಸಚಿವರ ವರದಿ ಆಧರಿಸಿ ಪಠ್ಯ ಪರಿಷ್ಕರಣೆ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

ಸಚಿವರ ವರದಿ ಆಧರಿಸಿ ಪಠ್ಯ ಪರಿಷ್ಕರಣೆ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ
bengaluru , ಬುಧವಾರ, 1 ಜೂನ್ 2022 (18:46 IST)
ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ವರದಿ ನೀಡಲು ಶಿಕ್ಷಣ ಸಚಿವರಿಗೆ ತಿಳಿಸಲಾಗಿದೆ. ಪ್ರಕರಣದ ಎಲ್ಲ ಆಯಾಮಗಳ ಪರಿಶೀಲನೆಯ ನಂತರ ವರದಿ ನೀಡುವುದಾಗಿ ಸಚಿವರು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಸ್ವಾಮೀಜಿಗಳನ್ನು ಸಚಿವರು ಭೇಟಿ ಮಾಡಿರುವುದಾಗಿ ತಿಳಿಸಿ, ಸತ್ಯಾಂಶವನ್ನು ದಾಖಲೆ ಸಮೇತ ನೀಡುವುದಾಗಿ ಸಚಿವರು ತಿಳಿಸಿದ್ದು, ವರದಿ ಬಂದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಂತೆ ಮಳಲಿ ಮಸೀದಿಯ  ಸರ್ವೇ ಕಾರ್ಯ ಆಗಬೇಕು ಎಂಬ ಕೂಗು ಕೇಳಿ ಬರುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಕರಣವು ನ್ಯಾಯಾಲಯದಲ್ಲಿದ್ದು, ಜೂನ್ 3ಕ್ಕೆ ವಿಚಾರಣೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಉಚಿತವಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯದಲ್ಲಿ ಎಲ್ಲವನ್ನೂ ಸೇರಿಸಿದ್ದೇವೆ ಆದಾಗ್ಯೂ ಅನಗತ್ಯ ವಿವಾದ