Select Your Language

Notifications

webdunia
webdunia
webdunia
webdunia

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

Thaawarchand Gehlot Office

Sampriya

ಬೆಂಗಳೂರು , ಗುರುವಾರ, 16 ಅಕ್ಟೋಬರ್ 2025 (17:21 IST)
Photo Credit X
ಬೆಂಗಳೂರು:  ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ನೂತನವಾಗಿ ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ನೂತನವಾಗಿ ನೇಮಕಗೊಂಡಿರುವ ರಾಜ್ಯ ಮಾಹಿತಿ ಆಯುಕ್ತರಿಗೆ ಇಂದು ರಾಜಭವನದ ಬ್ಯಾಂಕ್ವೇಟ್ ‌ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು  ಅಧಿಕಾರ ಪ್ರಮಾಣ ವಚನ ಬೋಧಿಸಿದರು. 

ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರೆ, ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ