Publish Date: Wed, 07 Jul 2021 (09:00 IST)
Updated Date: Wed, 07 Jul 2021 (09:11 IST)
ಬೆಂಗಳೂರು: ರಾಷ್ಟ್ರಪತಿ ರಮಾನಾಥ್ ಕೋವಿಂದ್ ಕೆಲವು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಆ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವೂ ಒಂದಾಗಿದೆ.
ಕರ್ನಾಟಕಕಕ್ಕೆ ಥಾವರ್ ಚಂದ್ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಿದ್ದಾರೆ. ಥಾವರ್ ಚಂದ್ ಪ್ರಸ್ತುತ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
1948 ರಲ್ಲಿ ಮಧ್ಯಪ್ರದೇಶದಲ್ಲಿ ಜನಿಸಿದ ದಲಿತ ಸಮುದಾಯಕ್ಕೆ ಸೇರಿದವರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲು ವಾಸ ಅನುಭವಿಸಿದ್ದ ಗೆಹ್ಲೋಟ್ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.