Publish Date: Mon, 30 Mar 2020 (17:56 IST)
Updated Date: Mon, 30 Mar 2020 (17:58 IST)
ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯ 13 ವರ್ಷದ ಮಗನಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ಆ ಮೂಲಕ ಈ ಜಿಲ್ಲೆಯಲ್ಲಿ ಎರಡನೆ ಕೊರೊನಾ ಕೇಸ್ ದೃಢವಾದಂತಾಗಿದೆ.
ತುಮಕೂರು ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯ 13 ವರ್ಷದ ಮಗನಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇತನನ್ನು ಪಿ-80 ಎಂದು ಸರ್ಕಾರ ಗುರುತಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಐಸೋಲೆಟೇಡ್ ಮಾಡಲಾಗಿದೆ ಎಂದು ಹೇಳಿದರು.
ಕೊರೋನಾದಿಂದ ವ್ಯಕ್ತಿ ಸಾವಿನ ಹಿನ್ನೆಲೆಯಲ್ಲಿ ಸಿರಾ ನಗರವನ್ನು ಈಗಾಗಲೇ ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಬೇರೆ ಯಾರಿಗೂ ಕೊರೋನಾ ಸೋಂಕು ಹರಡಿಲ್ಲ ಎಂದಿದ್ದಾರೆ.