Select Your Language

Notifications

webdunia
webdunia
webdunia
webdunia

ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ್ದ 6ನೇ ಆರೋಪಿ ಅರೆಸ್ಟ್‌

Praveen Nettaru Case, BJP Leader Praveen Nettaru, Accused Mohammadh Sharif

Sampriya

ಮಂಗಳೂರು , ಶುಕ್ರವಾರ, 20 ಡಿಸೆಂಬರ್ 2024 (17:22 IST)
Photo Courtesy X
ಮಂಗಳೂರು:ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 6ನೇ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ.

ಈತನ ಪತ್ತೆಗಾಗಿ ಎನ್​ಐಎ‌ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಮಹಮ್ಮದ್ ಶರೀಫ್‌ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಚು ರೂಪಿಸಿದ್ದ. ಅದಲ್ಲದೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್​ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.

ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್​ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್​​​ಐಎ ಅಧಿಕಾರಿಗಳು ದಾಳಿ ಮಾಡಿದ್ದರು. ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಇಬ್ಬರು ಆರೋಪಿಗಳು ಆಶ್ರಯ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿರುವ ಆರೋಪಿ ನೌಷದ್ ಮನೆ ಮೇಲೆ ಕೂಡ ಎನ್​ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ಮಾಡಿದ್ದರು. ದಾಳಿ ವಿಚಾರ ತಿಳಿದು ಮನೆ ಲಾಕ್ ಮಾಡಿ ಕುಟುಂಬ ಪರಾರಿ ಆಗಿತ್ತು. ನೌಷದ್ ಪತ್ತೆಗೂ ಎನ್​ಐಎ 2 ಲಕ್ಷ ರೂ. ರಿವಾರ್ಡ್ ಘೋಷಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಸಿಟಿ ರವಿಗೆ ಬೆಂಬಲಿಸುವರಿಂದ ಹೆಣ್ಣುಮಕ್ಕಳಿಗೆ ಅವಮಾನ ಮಾಡುತ್ತಿದೆ: ಸಿಎಂ