Publish Date: Sun, 26 Jan 2020 (09:52 IST)
Updated Date: Sun, 26 Jan 2020 (09:53 IST)
ಬೆಂಗಳೂರು : ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಮಾಣೆಕ್ಯ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಧ್ವಜಾರೋಹಣ ನೇರವೇರಿಸಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆಗೆ ಮಾಣೆಕ್ಯ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಅವರು ಧ್ವಜಾರೋಹಣ ನೇರವೇರಿಸಿದ್ದಾರೆ. ಬಳಿಕ ರಾಜ್ಯಪಾಲರಿಂದ ಗೌರವವಂದನೆ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ಕರ್ನಾಟಕದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
ಉತ್ತಮ ಆಡಳಿತದಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ. ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳುವಂತಹ ಶಿಕ್ಷಣ ನೀಡಬೇಕು. ಮಹಾತ್ಮ ಗಾಂಧೀಜಿ ಕಂಡಿದ್ದ ಕನಸನ್ನು ನನಸು ಮಾಡಬೇಕು. ಮಹಿಳೆಯರಿಗೆ ನಿರ್ಭೀತ ವಾತಾವರಣವನ್ನು ಸೃಷ್ಟಿಸಬೇಕು. ಪ್ರವಾಹ ಸಂತ್ರಸ್ತರಿಗೆ ಸರ್ಕಾರ ಪರಿಹಾರವನ್ನು ನೀಡಿದೆ ಎಂದು ಅವರು ಹೇಳಿದ್ದಾರೆ.