Select Your Language

Notifications

webdunia
webdunia
webdunia
Saturday, 5 April 2025
webdunia

ಪಾದಯಾತ್ರೆಗೆ ತೆರೆ ಬಿದ್ದ ಬೆನ್ನಲ್ಲೇ ಗುಪ್ತ ಸಭೆ ನಡೆಸಿದ ವಿಜಯೇಂದ್ರ ವಿರೋಧಿ ಬಣ

BJP Protest On MUDA Scam

Sampriya

ಬೆಳಗಾವಿ , ಭಾನುವಾರ, 11 ಆಗಸ್ಟ್ 2024 (13:44 IST)
Photo Courtesy X
ಬೆಳಗಾವಿ: ಮುಡಾ, ವಾಲ್ಮೀಕಿ ಹಗರಣ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಮುಕ್ತಾಯವಾದ ಬೆನ್ನಲ್ಲೆ,  ಪಾದಯಾತ್ರೆಯಿಂದ ದೂರ ಉಳಿದಿದ್ದ ನಾಯಕರು ಇಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ.

ಇದೀಗ ಬೆಳಗಾವಿಯಿಂದ‌ ಖಾನಾಪುರ ತಾಲ್ಲೂಕಿನ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮಾರ್ಗದ ರೆಸಾರ್ಟ್ ನಲ್ಲಿ ನಾಯಕರು ನಡೆಯುತ್ತಿರುವ ಸಭೆ ಕುತೂಹಲ‌ ಮೂಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇನ್ನೂ ಸಭೆಯಲ್ಲಿ ಶಾಸಕರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಅರವಿಂದ ಲಿಂಬಾವಳಿ ಮತ್ತಿತರ ನಾಯಕರು ಪಾಲ್ಗೊಂಡಿದ್ದಾರೆ. ಇನ್ನೂ ಹಲವರು ಸೇರಲಿದ್ದಾರೆ.

ಬಿಜೆಪಿರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ  ಅಸಮಾಧಾನವಿರುವ ನಾಯಕರು ತಮ್ಮ ಮುಂದಿನ ಹೋರಾಟದ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತುಂಗಭದ್ರಾ ಡ್ಯಾಂನ ಪರಿಸ್ಥಿತಿ ಪರಶೀಲನೆಗೆ ಹೆಲಿಕಾಫ್ಟರ್ ಹತ್ತಿದ ಡಿಸಿಎಂ ಶಿವಕುಮಾರ್